ಅತ್ಯಾಚಾರ ಮಾಡಿ ಮಹಿಳೆ ಕೊಲೆ !

Kannada News

12-07-2017

ಬೆಂಗಳೂರು: ಕುಮಾರಸ್ವಾಮಿ ಲೇಔಟ್‍ನ ಓಂಶಕ್ತಿ ದೇವಾಲಯದ ಬಳಿ, ಮಂಗಳವಾರ ರಾತ್ರಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಯ ನಂತರ ಮೃತದೇಹವನ್ನು ಅರೆಬೆತ್ತಲೆ ಮಾಡಲಾಗಿರುವ ಮಹಿಳೆಯು, ಸುಮಾರು 40 ವರ್ಷ ವಯಸ್ಸಿನವರಾಗಿದ್ದು ಹೆಸರು ವಿಳಾಸ ಪತ್ತೆಯಾಗಿಲ್ಲ, ಎಂದು ಪೊಲೀಸರು ತಿಳಿಸಿದ್ದಾರೆ. ಅರೆಬೆತ್ತಲಾಗಿ ಮೃತದೇಹ ಬಿದ್ದಿರುವುದನ್ನು ಕಂಡ ಸ್ಥಳೀಯರು ಮಾಹಿತಿ ನೀಡಿದ ತಕ್ಷಣ, ಸ್ಥಳಕ್ಕಾಗಮಿಸಿದ ಕುಮಾರಸ್ವಾಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿರುವುದು ಕಂಡುಬಂದಿದೆ ಮೃತದೇಹದ ಮೇಲೆ ಗಾಯದ ಗುರುತುಗಳಿಲ್ಲ, ಉಸಿರುಗಟ್ಟಿಸಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ