ಕುಡಿದ ಮತ್ತಲ್ಲಿ ಸರಣಿ ಅಪಘಾತ !

Kannada News

12-07-2017

ಬೆಂಗಳೂರು: ನಗರದ ಚಂದ್ರಲೇಔಟ್ ಮುಖ್ಯ ರಸ್ತೆಯ ವಾಟರ್ ಟ್ಯಾಂಕ್ ಬಳಿ, ಮಂಗಳವಾರ ಮಧ್ಯರಾತ್ರಿ ಕುಡಿದ ಅಮಲಿನಲ್ಲಿ ಅತೀ ವೇಗವಾಗಿ ಇನೋವಾ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ಚಾಲಕ, ಸ್ವಿಫ್ಟ್ ಕಾರು, ಎರಡು ಬೈಕ್, ಒಂದು ಆಟೋಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆಸಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಅಪಘಾತದಲ್ಲಿ 10 ಮಂದಿ ಗಾಯಗೊಂಡಿದ್ದು ಅವರಲ್ಲಿ ಇಬ್ಬರಿಗೆ ಕಾಲು ಮುರಿದಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಂದ್ರಲೇಔಟ್ ಮುಖ್ಯ ರಸ್ತೆಯ ವಾಟರ್ ಟ್ಯಾಂಕ್ ಬಳಿ ರಾತ್ರಿ 11 ರ ವೇಳೆ ಕಂಠಪೂರ್ತಿ ಕುಡಿದು, ಅತೀ ವೇಗವಾಗಿ ಇನೋವಾ ಕಾರು ಚಲಾಯಿಸಿಕೊಂಡು ಬಂದ ಚಾಲಕ, ರಸ್ತೆ ಬದಿಯಲಿದ್ದ ಒಂದು ಸ್ವಿಫ್ಟ್ ಕಾರು, ಎರಡು ಬೈಕ್, ಒಂದು ಆಟೋಗೆ ಡಿಕ್ಕಿ ಹೊಡೆದು ಅಡ್ಡಾದಿಡ್ಡಿಯಾಗಿ ಹೋಗಿ ಅಂಗಡಿಗೂ ಗುದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಬ್ಯಾಟರಾಯನಪುರ ಸಂಚಾರ ಪೊಲೀಸರು ಇನೋವಾ ಕಾರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ