ಮಲಗ್ತೀವಿ ಮಣ್ಹಾಕಿ ಚಳುವಳಿ !

Kannada News

12-07-2017

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ವಿರೋಧಿಸಿ. ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಮಲಗ್ತೀವಿ ಮಣ್ಹಾಕಿ ಎಂಬ ವಿನೂತನ ಚಳವಳಿ ಇದಾಗಿದ್ದು, ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ, ಮದ್ದೂರಮ್ಮ ಕೆರೆಯಲ್ಲಿ ಈ ರೀತಿಯ ಪ್ರತಿಭಟನೆ ನಡೆಸಿದರು. ಕೆರೆಯಲ್ಲಿ ಗುಂಡಿ ತೆಗೆಸಿ ಅದರೊಳಗೆ ಮಲಗಿರುವ ಕಾರ್ಯಕರ್ತರು, ಸಮಸ್ಯೆಗೆ ಸ್ಪಂದಿಸದ ರಾಜ್ಯ ಸರ್ಕಾರ ನಮ್ಮ ಮೇಲೆ ಮಣ್ಣು ಹಾಕಿ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಆರು ದಿನಗಳಿಂದ ಕೆರೆಯಲ್ಲಿ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ, ಜಿಲ್ಲಾಧ್ಯಕ್ಷ ಉಮಾಶಂಕರ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ, ಈಗಾಗಲೇ ಸ್ಚಾಮೀಜಿ, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಬೆಂಬಲ ನೀಡಿದ್ದು, ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಿ, ಜಿಲ್ಲೆಯ ಕೆರೆ ತುಂಬಿಸಲು ಕಾರ್ಯಕರ್ತರ ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ಮಂಡ್ಯ ಮಲಗ್ತೀವಿ ಮಣ್ಹಾಕಿ ಚಳುವಳಿ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ