ಕರ್ನಾಟಕ ಇನ್ನೊಂದು ಕೇರಳವಾಗಬಾರದು..?  

Kannada News

13-07-2017

ಮೈಸೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸ್ವಚ್ಚತಾ ಅಭಿಯಾನ ನಡೆಸಿದ್ದಾರೆ. ಮೈಸೂರಿನ ಎನ್.ಆರ್ ವಿಧಾನಸಭಾ ಕ್ಷೇತ್ರದ, ರಾಜೇಂದ್ರ ನಗರದ ಉದ್ಯಾನವನದಲ್ಲಿ ಸ್ವಚ್ಚತಾ ಕಾರ್ಯಾ ಮಾಡಿದ್ದಾರೆ. ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಸುರೇಶ್ ಕುಮಾರ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಮತ್ತು ನೂರಾರು ಬಿಜೆಪಿ ಕಾರ್ಯಕರ್ತರು ಸ್ವಚ್ಚತಾ ಅಭಿಯಾನದಲ್ಲಿ ಭಾಗಿಯಾಗಿದ್ದರು. ಸ್ವಚ್ಚತಾ ಅಭಿಯಾನದ ನಂತರ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿರುವ ಕೋಮು ಗಲಭೆ ದುರದೃಷ್ಟಕರ. ಕೇರಳ ಮಾದರಿಯಲ್ಲಿ ದಕ್ಷಿಣ ಕನ್ನಡದಲ್ಲೂ ಅಹಿತಕರ ಘಟನೆಗಳು ನಡೆದಿವೆ. ಕರ್ನಾಟಕವನ್ನು ಮತ್ತೊಂದು ಕೇರಳವನ್ನಾಗಿಸಲು ಬಿಡಬಾರದು. ಕರ್ನಾಟಕ ಐಟಿಬಿಟಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ಜಾಗತೀಕವಾಗಿ ಗುರುತಿಸಿಕೊಂಡಿದೆ. ಇಲ್ಲಿನ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದಿದ್ದಾರೆ. ತಪ್ಪಿತಸ್ಥರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಇದೇ ವೇಳೆ ನಿರ್ಮಲಾ ಸೀತಾರಾಮನ್ ಆಗ್ರಹಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ