ಮುಸ್ಲಿಂ ಮತಗಳು ಕೈ ತಪ್ಪುವ ಭಯವೇ..?

Kannada News

13-07-2017

ಮೈಸೂರು: ದಕ್ಷಿಣ ಕನ್ನಡ ಕೋಮು ಗಲಭೆಗೆ ರಾಜ್ಯ ಸರ್ಕಾರದ ನಿರ್ಲಕ್ಷವೇ ಕಾರಣ ಎಂದು, ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಹಿಂದೂಪರ ಸಂಘಟನೆಗಳಿಗೆ ಮಾತ್ರ ಎಚ್ಚರಿಕೆ ನೀಡುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಸ್ಲಿಂ ಸಂಘಟನೆಗಳ ಬಗ್ಗೆ ಏಕೆ ಚಕಾರ ಎತ್ತುತ್ತಿಲ್ಲ. ಮುಸ್ಲಿಂ ರ ಮತಗಳು ಎಲ್ಲಿ ಕೈ ತಪ್ಪಿ ಹೋಗುತ್ತವೆಯೋ ಎಂಬ ಭಯದ ಕಾರಣಕ್ಕೆ ಆ ಸಮುದಾಯದ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ನವರಿಗೆ ಭಯವೇ ಎಂದು ಪ್ರಶ್ನಿಸಿದ್ದಾರೆ. ಈ ಹಿಂದೆ ಗಲಭೆಗಳಲ್ಲಿ ಭಾಗಿಯಾಗಿದ್ದ ಎಸ್.ಡಿ.ಪಿ.ಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದ ಕಾರಣ ಗಲಭೆಗಳು ಮತ್ತೆ ಮರುಕಳಿಸಿವೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರದ ನಿರ್ಲಕ್ಷ್ಯದ ಫಲವಾಗಿ ಭಟ್ಕಳದಲ್ಲಿ ಯಾಸಿನ್ ಭಟ್ಕಳ್, ರಿಯಾಜ್ ಭಟ್ಕಳ್ ರಂತಹ ರಕ್ತ ಬೀಜಾಸುರರು ತಲೆ ಎತ್ತುವಂತಾಗಿದೆ ಎಂದು ಟೀಕಾಪ್ರಹಾರ ಮಾಡಿದ್ದಾರೆ. ರಾಜ್ಯ ಸರ್ಕಾರವೇ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದರು. ರಾಜ್ಯ ಸರ್ಕಾರವೇ ಜನರ ಕೋಮು ಭಾವನೆಗಳನ್ನು ಕೆರಳಿಸುವ ಮುಖಾಂತರ ಮತಗಳ ಧ್ರುವೀಕರಣಕ್ಕೆ ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ