ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ !

Kannada News

13-07-2017

ಉಡುಪಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ತಾಲ್ಲೂಕಿನ ಪಡುಬೆಳ್ಳೆಯ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಗ್ರಮದ ಪಡುಬೆಳ್ಳೆಯಲ್ಲಿ ಜ್ಯುವೆಲ್ಲರಿ ಅಂಗಡಿ ನಡೆಸುತ್ತಿದ್ದ ಶಂಕರ್ ಮತ್ತು ಆತನ ಕುಟುಂಬಸ್ಥರು, ಸನೈಡ್ ತಿಂದು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಶಂಕರ ಆಚಾರ್ಯ (50), ನಿರ್ಮಲ ಆಚಾರ್ಯ( 44), ಶ್ರೇಯಾ( 22) ಶೃತಿ (23) ಮೃತರು. ಶಿರ್ವ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದೂ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ