ಟಿಪ್ಪರ್ ಲಾರಿಗೆ,ಟಾಟಾ ಸುಮೋ ಡಿಕ್ಕಿ !

Kannada News

13-07-2017

ಬೆಂಗಳೂರು: ದೇವನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 7 ರ ಕನ್ನಮಂಗಲ ಗೇಟ್ ಬಳಿ ರಸ್ತೆ ಕ್ರಾಸ್ ಮಾಡುತ್ತಿದ್ದ ಟಿಪ್ಪರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದು ಸುಮೋದಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಂಭತ್ತು ಜನ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಸುಮೋ ದೇವನಹಳ್ಳಿಯಿಂದ ಏರ್ ಪೋರ್ಟ್ ಕಡಗೆ ಹೊರಟಿತ್ತು. ಈ ವೇಳೆ ಕನ್ನಮಂಗಲ ಗೇಟ್ ಬಳಿ ಪಕ್ಕದ ರಸ್ತೆಯಿಂದ ಮತ್ತೊಂದು ರಸ್ತೆಗೆ ಲಾರಿ ಕ್ರಾಸ್ ಮಾಡುವ ವೇಳೆ ಟಾಟಾ ಸುಮೋ ಅತಿ ವೇಗದಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಇನ್ನು ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡವರನ್ನು ಯಲಹಂಕ ಹಾಗೂ ದೇವನಹಳ್ಳಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಕೆಂಪೇಗೌಡ ವಿಮಾನ ನಿಲ್ದಾಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ