ರೈಲು ತಡೆದು ಪ್ರತಿಭಟನೆ !

Kannada News

13-07-2017

ಬೆಂಗಳೂರು: ನಗರದ ಹೊರವಲಯದ ಬೆಳ್ಳಂದೂರು ಬಳಿಯ ಕಾರ್ಮೆಲರಾಮ್ ರೈಲು ನಿಲ್ದಾಣದಲ್ಲಿ ಗುರುವಾರ ಬೆಳಗ್ಗೆ ಪ್ರಯಾಣಿಕರು ಸೇರಿದಂತೆ ಸ್ಥಳೀಯರು ರೈಲು ತಡೆದು ಪ್ರತಿಭಟನೆ ನಡೆಸಿದರು. ತಮಿಳುನಾಡಿಗೆ ಹೋಗುವ ಐದು ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಮೊದಲು ಧರ್ಮಪುರಿ ಪ್ಯಾಸೆಂಜರ್ ರೈಲನ್ನು ತಡೆದು ಪ್ರಯಾಣಿಕರು ಪ್ರತಿಭಟನೆ ನಡೆಸಿದರು. ಈ ವೇಳೆ ರೈಲುಗಳು ಸರಿಯಾದ ಸಮಯಕ್ಕೆ ಬರುವುದಿಲ್ಲವೆಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು. ಒಂದೂವರೆ ಗಂಟೆಗಳಿಂದ ರೈಲು ತಡೆದು ಪ್ರತಿಭಟನೆ ನಡೆಸಿದ್ದರಿಂದ ತಮಿಳುನಾಡಿನಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರು ಪರದಾಡುವಂತಾಯಿತು. ನಾಗರಕೊಯಿಲ್, ಪಾಂಡಿಚೇರಿ, ಹೊಸೂರು ಪ್ಯಾಸೆಂಜರ್, ಸೇಲಂ ಪ್ಯಾಸೆಂಜರ್ ರೈಲುಗಳು, ಪ್ರತಿಭಟನೆಯಿಂದಾಗಿ ವಿಳಂಬವಾಗಿವೆ. ವಿಷಯ ತಿಳಿದು ರೈಲ್ವೆ ಪೊಲೀಸರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪ್ರತಿಭಟನಾಕಾರರ ಮನವೊಲಿಸಿದರು.


ಸಂಬಂಧಿತ ಟ್ಯಾಗ್ಗಳು

ಬೆಂಗಳೂರು ರೈಲು ತಡೆದು ಪ್ರತಿಭಟನೆ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ