ಅವ್ಯವಹಾರಗಳ ವಿಚಾರಣೆಗೆ ಸಿಎಂ ಆದೇಶ !

Kannada News

13-07-2017

ಬೆಂಗಳೂರು: ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರಗಳ ಬಗ್ಗೆ, ಉನ್ನತ ಮಟ್ಟದ ವಿಚಾರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ನೀಡಿದ್ದಾರೆ. ಕಾರಾಗೃಹದಲ್ಲಿ ಬಂಧಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾಗೆ ವಿಶೇಷ ಆತಿಥ್ಯ ನೀಡಲು ಕಾರಾಗೃಹಗಳ ಇಲಾಖೆಯ ಅಧಿಕಾರಿಗಳು ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳು ಈ ಆದೇಶ ನೀಡಿದ್ದಾರೆ. ಈ ವಿಚಾರದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿಯವರು ಉನ್ನತ ಮಟ್ಟದ ತನಿಖೆ ನಡೆಸುವ ತೀರ್ಮಾನ ಕೈಗೊಂಡಿದ್ದಾರೆ.  ಕಾರಾಗೃಹದಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರಗಳ ಬಗ್ಗೆ ಉನ್ನತ ಮಟ್ಟದಲ್ಲಿ ಸಮಗ್ರ ವಿಚಾರಣೆ ನಡೆಸಿ ಶೀಘ್ರದಲ್ಲೇ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ