ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ !

Kannada News

14-07-2017

ಮೈಸೂರು: ಇಂದು ಆಷಾಡ ಮಾಸದ ಮೂರನೇ ಶುಕ್ರವಾರವಾಗಿರುವ ಹಿನ್ನೆಲೆ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ಬೆಳಗಿನಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಇಂದು ಚಾಮುಂಡೇಶ್ವರಿ ದೇವಿಗೆ ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಬಗೆಯ ಅಭಿಷೇಕಗಳು ನೆಡಯಲಿದ್ದೂ, ಶಕ್ತಿ ದೇವತೆಯ ದರ್ಶನ ಪಡೆಯಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ದುರ್ಗೆಯ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ನಾಡಿನ ಅಧಿದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದು ಭಕ್ತರು ಆನಂದಿಸುತ್ತಿದ್ದಾರೆ. ಭಕ್ತರ ಸಂಖ್ಯೆ ಹೆಚ್ಚಾಗಿರುವ ಪರಿಣಾಮ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆಯಕಟ್ಟಿನ ಸ್ಥಳಗಳಲ್ಲಿ ಸಿ.ಸಿ ಕ್ಯಾಮರಾಗಳ ಮೂಲಕ, ಹೆಚ್ಚಿನ ನಿಗಾ ಇರಿಸಲಾಗಿದೆ. ಇಂದು ಕೂಡ ಖಾಸಗಿ ವಾಹನಗಳು ಬೆಟ್ಟಕ್ಕೆ ಪ್ರವೇಶಿಸದಂತೆ ನಿರ್ಬಂಧ ಹೇರಿದ್ದಾರೆ. ಖಾಸಗಿ ವಾಹನಗಳನ್ನು ಚಾಮುಂಡಿ ಬೆಟ್ಟದ ತಪ್ಪಲಿನ, ಲಲಿತಮಹಲ್ ಹೆಲಿಪ್ಯಾಡ್ ಬಳಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಲಲಿತಮಹಲ್ ಹೆಲಿಪ್ಯಾಡ್ ಬಳಿಯಿಂದ ಸಾರ್ವಜನಿಕರಿಗೆ ಉಚಿತವಾಗಿ ಸಾರಿಗೆ ಬಸ್ ಗಳಲ್ಲಿ ಹೋಗಿ ಬರಲು ವ್ಯವಸ್ಥೆ ಕೂಡ ಮಾಡಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ