ಕಾರು-ಟಿಟಿ ನಡುವೆ ಅಪಘಾತ, ಟಿಟಿ ಪಲ್ಟಿ !

Kannada News

14-07-2017

ಬೆಂಗಳೂರು: ಪರಪ್ಪನ ಅಗ್ರಹಾರದ ಕಸುವಿನಹಳ್ಳಿ ರಸ್ತೆಯಲ್ಲಿ ಶುಕ್ರವಾರ ನಸುಕಿನಲ್ಲಿ ವೇಗವಾಗಿ ಹೋಗುತ್ತಿದ್ದ ಟೆಂಪೋ ಟ್ರಾವೆಲರ್(ಟಿಟಿ) ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಡಿಕ್ಕಿಯಿಂದ ಟಿಟಿಯು ಸಿನಿಮೀಯ ರೀತಿಯಲ್ಲಿ ಉರುಳಿಬಿದ್ದಿದೆ. ಅದರಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಇನ್ನೂ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ಕಸುವಿನ ಹಳ್ಳಿ ರಸ್ತೆಯಲ್ಲಿ ಮುಂಜಾನೆ 4ರ ವೇಳೆ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ತೆರಳುತ್ತಿದ್ದ ಟಿಟಿ ವಾಹನ, ಸರ್ಜಾಪುರ ಕಡೆ ತೆರಳುತಿದ್ದ ಇಟಿಯಸ್ ಕಾರು ಮುಖಾಮುಖಿ ಡಿಕ್ಕಿಯಾಗಿ ಸಿನಿಮೀಯ ರೀತಿಯಲ್ಲಿ ಟಿಟಿ ಪಲ್ಟಿ ಹೊಡೆದಿದೆ. ಅಪಘಾತದಲ್ಲಿ ಕಾರು ಮತ್ತು ಟಿಟಿ ವಾಹನ ಸಂಪೂರ್ಣ ಜಖಂಗೊಂಡಿದ್ದು, ಸ್ಥಳಕ್ಕೆ ಧಾವಿಸಿದ ಹೆಚ್‍.ಎಸ್‍.ಆರ್ ಸಂಚಾರ ಪೊಲೀಸರು ಗಾಯಾಳುಗಳನ್ನು ಆಸ್ಪತ್ರಗೆ ದಾಖಲಿಸಿದ್ದಾರೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ