ರಾಜ್ಯ ಸರ್ಕಾರ, ಹೈಜಾಕ್ ಸರ್ಕಾರ !

Kannada News

14-07-2017

ಮೈಸೂರು: ಕೇಂದ್ರ ಸರ್ಕಾರ ಪುರಸ್ಕೃತ ಯೋಜನೆಗಳನ್ನು ರಾಜ್ಯ ಸರ್ಕಾರ ಹೈಜಾಕ್ ಮಾಡುತ್ತಿದೆ ಎಂದು, ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಅನುದಾನದಡಿ ಕೈಗೆತ್ತಿಕೊಳ್ಳುವ ಕಾಮಗಾರಿಗಳ ಉದ್ಘಾಟನೆಗೂ ತನ್ನನ್ನು ಆಹ್ವಾನ ನೀಡುತ್ತಿಲ್ಲ ಎಂದು ಆರೋಪಿಸಿದ ಅವರು, ನಾಳೆ ಮೈಸೂರಿನ ಏಕಲವ್ಯ ನಗರದಲ್ಲಿ ನರ್ಮ್ ಯೋಜನೆಯಡಿ ನಿರ್ಮಾಣವಾಗಿರುವ ಮನೆಗಳ ಉದ್ಘಾಟನೆಗೂ ಕೇಂದ್ರ ನಗರಾಭಿವೃದ್ದಿ ಸಚಿವರಿಗೆ ಆಹ್ವಾನ ನೀಡಿಲ್ಲ ಎಂದು ದೂರಿದ್ದಾರೆ. ಎಲ್ಲಾ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಉದ್ಘಾಟನೆ ಮಾಡುವ ಮೂಲಕ ಕೇಂದ್ರದ ಯೋಜನೆಗಳನ್ನು ಹೈಜಾಕ್ ಮಾಡುತ್ತಿದ್ದಾರೆ, ಹಾಗಾದರೆ ಇದು ಕೇಂದ್ರದ ದುಡ್ಡಿನಲ್ಲಿ ಸಿದ್ದರಾಮಯ್ಯ ನವರು ನಡೆಸುತ್ತಿರುವ ಜಾತ್ರೆಯೇ ? ಎಂದು ಪ್ರಶ್ನಿಸಿದ್ದಾರೆ. ಕೇಂದ್ರದ ಯೋಜನೆಗಳನ್ನು ಹೈಜಾಕ್ ಮಾಡಿಕೊಂಡು ಉದ್ಘಾಟನೆಗೆ ಮುಂದಾದರೆ ಅಡ್ಡಿಪಡಿಸ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ