ವೃದ್ಧ ದಂಪತಿ ಆತ್ಮಹತ್ಯೆ !

Kannada News

15-07-2017

ಬೆಂಗಳೂರು: ಬೆಂಗಳೂರಿನಲ್ಲಿ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಕೃಷ್ಣೋಜಿರಾವ್, ಸಾವಿತ್ರಿಬಾಯಿ ಆತ್ಮಹತ್ಯೆಗೆ ಶರಣಾದವರು. ಎರಡು ವರ್ಷದಿಂದ ಖಾಯಿಲೆಯಿಂದ ಬಳಲುತ್ತಿದ್ದ ಸಾವಿತ್ರಿಬಾಯಿ ಮತ್ತು, ಪತ್ನಿಯ ಅನಾರೋಗ್ಯ ದಿಂದ ಬೇಸತ್ತ ಪತಿಯೂ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ದೊಡ್ಡಬೊಮ್ಮಸಂದ್ರದಲ್ಲಿ ಈ  ಘಟನೆ ನಡೆದಿದೆ. ಸ್ಥಳಕ್ಕೆ ವಿದ್ಯಾರಣ್ಯಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ