ಯಡಿಯೂರಪ್ಪ ಮನೆ ಮುತ್ತಿಗೆಗೆ ಯತ್ನ !

Kannada News

15-07-2017

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ನ ರೈತರ ಸಾಲ ಮನ್ನಾ ವಿಚಾರವಾಗಿ, ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ. ಪ್ರತಿಭಟನಾಕಾರರು ಡಾಲರ್ಸ್ ಕಾಲೋನಿಯ ಬಿ.ಎಸ್.ಯಡಿಯೂರಪ್ಪ ಮನೆಗೆ ಮುತ್ತಿಗೆ ಯತ್ನ ನಡೆಸಿದರಾದರೂ, ಕಾರ್ಯಕರ್ತರನ್ನು ಪೊಲೀಸರು ತಡೆಹಿಡಿದಿದ್ದಾರೆ. ಯಡಿಯೂರಪ್ಪ ಮನೆ ಮುಂದೆ ಬ್ಯಾರಿಕೇಟ್ ಗಳನ್ನು ಅಳವಡಿಸುವ ಮೂಲಕ ಪೊಲೀಸರು, ಕಾರ್ಯಕರ್ತರನ್ನು ತಡೆ ಹಿಡಿದರು. ಈ ಸಂದರ್ಭ ಕೇಂದ್ರ ಸರ್ಕಾರ ಹಾಗು ರಾಜ್ಯದ ಬಿಜೆಪಿ ನಾಯಕರ ವಿರುದ್ದ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲ ಮನ್ನಾ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಇದೇ ವೇಳೆ ಆಗ್ರಹಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ