ಸಿಎಂ ನಿವಾಸದ ಬಳಿ ಪ್ರತಿಭಟನೆ !

Kannada News

15-07-2017

ಮೈಸೂರು: ಮೈಸೂರಿನ ಟಿ.ಕೆ ಬಡಾವಣೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದ ಬಳಿ ಫಾಲ್ಕನ್ ಟೈರ್ಸ್ ಕಾರ್ಖಾನೆ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿರುವ ಫಾಲ್ಕನ್ ಟೈರ್ಸ್ ಕಾರ್ಖಾನೆಯು, ಪುನರಾರಂಭಕ್ಕೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಘೋಷಣೆಗಳನ್ನು ಕೂಗಿದ ನೌಕರರು, ಕಾರ್ಖಾನೆ ಪುನಾರಂಭವಾಗದಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫಾಲ್ಕನ್ ಟೈರ್ಸ್ ಕಾರ್ಖಾನೆ ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದ ಬಳಿ ಬಿಗಿ ಭದ್ರತೆಯನ್ನು ಮಾಡಲಾಗಿತ್ತು, ಸಿದ್ದರಾಮಯ್ಯ ನಿವಾಸದ ರಸ್ತೆಗಳನ್ನು ಸಂಪರ್ಕಿಸುವ ರಸ್ತೆಯಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ