ಸಕ್ಕರೆ ಕಾರ್ಖಾನೆ: ಪುನರಾರಂಭಕ್ಕೆ 20 ಕೋಟಿ ಸಾಲ

Kannada News

17-07-2017

ಮೈಸೂರು: ಸ್ಥಗಿತಗೊಂಡಿರುವ ಶ್ರೀರಾಮ ಸಕ್ಕರೆ ಕಾರ್ಖಾನೆಯ ಪುನರಾರಂಭಕ್ಕೆ ಕಾರ್ಯೋನ್ಮುಖವಾದ ಮೈಸೂರು ಜಿಲ್ಲಾಡಳಿತ. ಕಾರ್ಖಾನೆಯ ಪುನರಾರಂಭಕ್ಕೆ ಬ್ಯಾಂಕುಗಳಿಂದ ೨೦ ಕೋಟಿ ರೂಪಾಯಿ ಸಾಲ ಪಡೆದುಕೊಳ್ಳಲು ಇಂದು ಜಿಲ್ಲಾಡಳಿತ ಪ್ರಸ್ತಾವನೆ ಸಲ್ಲಿಸಿದೆ. ಈ ಕುರಿತು ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಜಿಲ್ಲಾಧಿಕಾರಿ ಡಿ. ರಂದೀಪ್ ಅಧ್ಯಕ್ಷತೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಗಳು ಮತ್ತು ಡಿಸಿಸಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಬ್ಯಾಂಕುಗಳು ನೀಡುವ ಸಾಲಕ್ಕೆ ಸರ್ಕಾರದ ಗ್ಯಾರಂಟಿ ನೀಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ. ಕಳೆದ ಐದು ವರ್ಷದಿಂದ ಸ್ಥಗಿತಗೊಂಡಿರುವ  ಶ್ರೀರಾಮ ಸಕ್ಕರೆ ಕಾರ್ಖಾನೆಯೂ, ಜಿಲ್ಲೆಯ ಕೆ.ಆರ್ ನಗರ ತಾಲ್ಲೂಕಿನ  ಚುಂಚನಕಟ್ಟೆ ಬಳಿ ಇದೆ. ಈ ಸಂಬಂಧ ಕೆ.ಆರ್ ನಗರ ಶಾಸಕ ಸಾ.ರಾ. ಮಹೇಶ್ ರಾಜೀನಾಮೆಗೂ ಮುಂದಾಗಿದ್ದರು. ಕಳೆದ ವಿಧಾನಸಭೆ ಅಧಿವೇಶನದ ವೇಳೆ ಸದನದಲ್ಲೇ ಸಿಎಂ ಗೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದರು ಈ ವೇಳೆ ಕಾರ್ಖಾನೆ ಪುನರ್ ಆರಂಭಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಇದೀಗ ಸರ್ಕಾರದ ನಿರ್ದೇಶನದ ಮೇರೆಗೆ ಇಂದು ಬ್ಯಾಂಕ್ ಅಧಿಕಾರಿಗಳ ಜೊತೆ ಸಭೆ ನಡೆಸಿರುವುದಾಗಿ ಜಿಲ್ಲಾಧಿಕಾರಿ ಡಿ.ರಂದೀಪ್ ಅವರು ತಿಳಿಸಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ