ಪೀಠೋಪಕರಣ ಅಂಗಡಿಗೆ ಬೆಂಕಿ !

Kannada News

17-07-2017 276

ಬೆಂಗಳೂರು: ಆಕಸ್ಮಿಕ ಬೆಂಕಿ ತಗುಲಿ ಹಳೆ ಹಾಗೂ ಹೊಸ ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿರುವ ದುರ್ಘಟನೆ ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯ ದೊರೆಸ್ವಾಮಿ ಪಾಳ್ಯದಲ್ಲಿ ನಡೆದಿದೆ. ಇಲ್ಲಿನ ಪ್ಯಾಪುಲರ್ ಫರ್ನೀಚರ್ ಬಜಾರ್ ನಲ್ಲಿ ಘಟನೆ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಜೆ 5ರ ವೇಳೆ ತಗುಲಿದ ಬೆಂಕಿ ಸ್ವಲ್ಪ ಹೊತ್ತಿನಲ್ಲೇ ಇಡೀ ಅಂಗಡಿ ಆವರಿಸಿದೆ. ದಟ್ಟ ಹೊಗೆ ಬೆಂಕಿ ಹೊರಬರುತ್ತಿರುವುದನ್ನು ಗಮಿಸಿದ ಸ್ಥಳೀಯರು ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕ ದಳದ ನಾಲ್ಕು ವಾಹನಗಳು ಬೆಂಕಿ ನಂದಿಸಿವೆ. ಬಜಾರ್‍ ನಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಯಿಂದ ಲಕ್ಷಾಂತರ ರೂ. ಮೌಲ್ಯದ ಹಳೆ ಹಾಗೂ ಹೊಸ ಪೀಠೋಪಕರಣಗಳು ಸುಟ್ಟುಹೋಗಿದ್ದು, ಪುಟ್ಟೇನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ