ಮಾರಕಾಸ್ತ್ರಗಳಿಂದ ಮೂವರ ಮೇಲೆ ಹಲ್ಲೆ !

Kannada News

18-07-2017

ಹುಬ್ಬಳ್ಳಿ: ಮಾರಕಾಸ್ತ್ರಗಳಿಂದ ಮೂವರ ಮೇಲೆ ದಾಳಿಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಶಾಂತಿನಗರದಲ್ಲಿ, ಹೆಲ್ಮೆಟ್ ಹಾಕಿಕೊಂಡು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ. ಇಬ್ಬರು ಮಹಿಳೆಯರು ಸೇರಿದಂತೆ ಒಬ್ಬ ಪುರುಷನ ಮೇಲೆ ಹಲ್ಲೆ ನಡೆಸಿದ್ದಾರೆ. ಯಲ್ಲವ್ವ, ಪ್ರದೀಪ್, ಭಾರತಿ ಹಲ್ಲೆಗೊಳಗಾದವರು. ಇವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದೂ, ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ,  ಸ್ಥಳಕ್ಕೆ ಅಶೋಕ ನಗರದ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಶೋಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದ್ದೂ, ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ