ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟೆಚ್ಚರ !

Kannada News

18-07-2017

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನೆನ್ನೆ ನಡೆದ ಎನ್ ಕೌಂಟರ್ ನಲ್ಲಿ, ಮೂವರು ಉಗ್ರರನ್ನು ಸೇನೆ ಹತ್ಯೆ ಮಾಡಲಾಗಿತ್ತು. ಉಗ್ರರು ದಾಳಿ ಮಾಡಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಸೇನಾಪಡೆಗಳು ಕಾರ್ಯಾಚರಣೆ ನಡೆಸಿ, ಮೂವರು ಉಗ್ರರನ್ನು ಸದೆ ಬಡಿದಿದ್ದಾರೆ. ಅನಂತ್ ನಾಗ್ ಜಿಲ್ಲೆಯ ವನಿಹಮಾ ಗ್ರಾಮದಲ್ಲಿ ಈ ಎನ್ ಕೌಂಟರ್ ನಡೆದಿತ್ತು. ಲಷ್ಕರೆ ಎ ತೋಯ್ಬಾ ಉಗ್ರ ಸಂಘಟನೆಗೆ ಸೇರಿದ್ದ ಮೂವರು ಭಯೋತ್ಪಾದಕರ ಮೃತದದೇಹಗಳನ್ನ ಸೇನೆ ವಶಪಡಿಸಿಕೊಂಡಿತ್ತು, ಒಂದು ಎಕೆ 47, ಒಂದು ಎಸ್ ಎಲ್ ಆರ್ ಮತ್ತು ಒಂದು ಪಿಸ್ತೂಲ್ ಅನ್ನ ವಶಕ್ಕೆ ಪಡೆಯಲಾಗಿತ್ತು.

ಈ ಹಿನ್ನಲೆಯಲ್ಲಿ ಅನಂತ್ ನಾಗ್ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಇನ್ನು, ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಸಂದೇಶಗಳು ಹರಿದಾಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಇಂಟೆರ್ ನೆಟ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇಂದು ಸಹ ಗಡಿ ನಿಯಂತ್ರಣ ರೇಖೆಯಲ್ಲಿ ಒಳ ನುಸರಳು ಯತ್ನಿಸುತ್ತಿದ್ದ ಮೂವರು ಉಗ್ರರನ್ನ ಬಂಡಿಪೋರಾದ ಪ್ರದೇಶದಲ್ಲಿ ಭದ್ರತಾ ಪಡೆಗಳು ಹೊಡೆದು ಉರುಳಿಸಿವೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ