ಜಂಟಿಯಾಗಿ ಅಗ್ರಸ್ಥಾನ ಪಡೆದ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ

Kannada News

08-03-2017

ಭಾರತದ ಸ್ಪಿನ್ ಮಾಂತ್ರಿಕರಾದ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್ ಬೌಲಿಂಗ್ ರ‍್ಯಾಂಕಿಂಗ್​ನಲ್ಲಿ ಜಂಟಿಯಾಗಿ ಅಗ್ರಸ್ಥಾನ ಪಡೆದಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಇಬ್ಬರು ಸ್ಪಿನ್ನರ್​ಗಳು ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿದ ಕೀರ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರು ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಜಡೇಜಾ ಮತ್ತು ಅಶ್ವಿನ್ ಅದ್ಭುತ ಬೌಲಿಂಗ್ ನಿರ್ವಹಣೆ ತೋರಿ 7 ವಿಕೆಟ್ ಪಡೆಯುವ ಮೂಲಕ ಇದೇ ಮೊದಲ ಬಾರಿಗೆ ಟೆಸ್ಟ್ ಬೌಲಿಂಗ್ ರ‍್ಯಾಂಕಿಂಗ್​ನಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ.ಇದಕ್ಕೆ ಮುನ್ನ 2008ರ ಏಪ್ರಿಲ್​ನಲ್ಲಿ ದಕ್ಷಿಣ ಆಫ್ರಿಕಾದ ಡೇಲ್ ಸ್ಟೈನ್ ಮತ್ತು ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಟೆಸ್ಟ್ ಬೌಲಿಂಗ್ ರ‍್ಯಾಂಕಿಂಗ್​ನಲ್ಲಿ ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿದ್ದರು.

ಆಸ್ಟ್ರೇಲಿಯಾ ವಿರುದ್ಧದ 2 ಪಂದ್ಯಗಳಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಒಂದು ಸ್ಥಾನ ಕುಸಿದು 3ನೇ ಸ್ಥಾನ ಪಡೆದಿದ್ದಾರೆ

Links :ಸಂಬಂಧಿತ ಟ್ಯಾಗ್ಗಳು

ಸಂಬಂಧಿತ ಟ್ಯಾಗ್ಗಳನ್ನು ಲಭ್ಯವಿಲ್ಲಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


Dhsjsksl
  • raju
  • Professional