ನಕಲಿ ಬ್ರ್ಯಾಂಡ್ ಬಟ್ಟೆ: ವ್ಯಕ್ತಿ ಬಂಧನ !

Kannada News

18-07-2017

ಬೆಂಗಳೂರು: ಪೂಮಾ, ಅಡಿಗಾಸ್, ನೈಕ್ ಇನ್ನಿತರ ಕಂಪನಿಗಳ ನಕಲಿ ಬಟ್ಟೆಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ 4 ಲಕ್ಷ 71 ಸಾವಿರ ಮೌಲ್ಯದ ನಕಲಿ ಬಟ್ಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಆರ್.ಟಿ ನಗರದ ರಾಘವೇಂದ್ರ ಲೇಔಟ್‍ನ ಮೊಹಮ್ಮದ್ ರಿಯಾಜ್ ಕುರೇಶಿಯ (35) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 4 ಲಕ್ಷ 71 ಸಾವಿರ ಮೌಲ್ಯದ ನಕಲಿ ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಕಮ್ಮನಹಳ್ಳಿ ಮುಖ್ಯರಸ್ತೆಯ ಅಂಗಡಿಯೊಂದರಲ್ಲಿ ನಕಲಿ ಬಟ್ಟೆಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಪೊಲೀಸರು ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇನ್ನೊಂದೆಡೆ ವಿಜಯನಗರದ ಸಂಪಿಗೆ ಬಡಾವಣೆಯ ವಾಸದ ಮನೆಯೊಂದರಲ್ಲಿ ಅಂಧರ್-ಬಾಹರ್ ಜೂಜಾಟವಾಡುತ್ತಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿ 1 ಲಕ್ಷ 650 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ