ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ !

Kannada News

19-07-2017

ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಮೈಸೂರಿನ ಗಾಂಧೀ ವೃತ್ತದಲ್ಲಿ, ಬಿಜೆಪಿ ನಗರ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ದಕ್ಷಿಣ ಕನ್ನಡದಲ್ಲಿ ನಡೆದಿರುವ ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಖಂಡಿಸಿ ಹಾಗೂ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು, ಸ್ಥಳೀಯ ಮುಖಂಡರು ಭಾಗಿಯಾಗಿದ್ದರು. ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದು ರಾಜ್ಯ ಸರ್ಕಾರದ ವೈಫಲ್ಯ ಎಂದು ಆರೋಪಿಸಿದರು.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ