ಮಳೆಗೂ ಹೆದರದ ಪ್ರತಿಭಟನಾಕಾರರು !

Kannada News

19-07-2017

ಧಾರವಾಡ: ವರುಣನ ಅರ್ಭಟದ ಮಧ್ಯೆಯೇ ಧಾರವಾಡದಲ್ಲಿ ಪ್ರತಿಭಟನೆಗಳು ಜೋರಾಗಿ ನಡೆದಿವೆ. ೧೩ ಗ್ರಾಮಗಳನ್ನು ಧಾರವಾಡ ತಾಲ್ಲೂಕಿನಲ್ಲೇ, ಮುಂದುವರೆಸುವಂತೆ ಆಗ್ರಹಿಸಿ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಎತ್ತಿನ ಬಂಡಿ ಕಟ್ಟಿಕೊಂಡು ಬಂದು, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮಳೆಯನ್ನೂ ಲೆಕ್ಕಿಸದೇ ನೂರಾರು ಗ್ರಾಮಸ್ಥರು ಪ್ರತಿಭಟನೆ ಮುಂದುವರೆಸಿದ್ದಾರೆ. ಇನ್ನೊಂದೆಡೆ ಮಳೆ ನಡುವೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ, ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್, ಸಂಸದ ಪ್ರಹ್ಲಾದ್ ಜೋಶಿ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿಹಿಡಿಯುತ್ತಾ ಭಾರೀ ಪ್ರತಿಭಟನೆ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ