ರಾಜ್ಯದ ಹಲವೆಡೆ ಜಟಿ-ಜಟಿ ಮಳೆ !

Kannada News

19-07-2017

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಜಿಟಿ ಜಿಟಿ ಮಳೆಯ ಅಬ್ಬರ ಜೋರಾಗಿದ್ದೂ, ನಿನ್ನೆಯಿಂದ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ಜಿಟಿ ಜಿಟಿ ಮಳೆಯಿಂದ ಅವಳಿ ನಗರದ ಜನಜೀವನ ಅಸ್ತವ್ಯಸ್ತವಾಗಿದ್ದರೂ, ಮಳೆಯ ಆಗಮನದಿಂದ ರೈತಾಪಿ ವರ್ಗ ಸಂತಸಗೊಂಡಿದೆ. ಇನ್ನು ಧಾರವಾಡದಲ್ಲಿ ಕಳೆದ ಎರಡು ದಿ‌ನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಲವೆಡೆ ಹಾನಿಯುಂಟಾಗಿದೆ. ಇನ್ನು ಜಿಲ್ಲೆಯಲ್ಲಿನ ಹಲವಾರು ಕೆರೆಗಳು ಭರ್ತಿಯಾಗಿದ್ದೂ, ನೇಗಿಲಯೋಗಿಯ ಮುಖದಲ್ಲಿ ಮಂದಹಾಸ ಮೂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿಲ್ಲೂ, ಕಳೆದ ೨೪ ಗಂಟೆಗಳಿಂದ ಜಿಲ್ಲೆಯ ಮಲೆನಾಡಿನ ಭಾಗದಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿದೆ. ಮಲೆನಾಡಿನ ಭಾಗವಾದ ಕೊಪ್ಪ.     ಎನ್ ಆರ್ ಪುರ, ಶೃಂಗೇರಿ, ಮೂಡಿಗೆರೆ ಭಾಗದಲ್ಲಿ ಮಳೆ ಸುರಿಯುತ್ತಿದೆ. ಇದರಿಂದ ಭದ್ರಾ, ತುಂಗಾ, ಹೇಮಾವತಿ ನದಿಗಳ ನೀರಿನ ಮಟ್ಟ ಏರಿಕೆ ಆಗುತ್ತಿದೆ. ಇನ್ನೊಂದಡೆ ಮಳೆಯಿಂದ ಅಲ್ಲಿಲ್ಲ ಅನಾಹುತಗಳು ಸಂಭವಿಸಿವೆ. ಬಾಳೆಹೊನ್ನೂರಿನ ಚಿತ್ತಮಕ್ಕಿ ಗ್ರಾಮದಲ್ಲಿ ಲಕ್ಷ್ಮಣ್ ಎನ್ನುವ ಮನೆ ಮೇಲೆ ಭಾರಿ ಗ್ರಾತದ ಮರ ಬಿದ್ದಿದೆ. ಇದರಿಂದ ಮನೆ ಸಂಪೂರ್ಣವಾಗಿ ಜಖಂ ಆಗಿದ್ದು. ಅದೃಷ್ಟವಶಾತ್ ಮನೆಯಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ