ಕಾರಾಗೃಹ ಅವ್ಯವಹಾರ: ಶೀಘ್ರದಲ್ಲೇ ವರದಿ !

Kannada News

19-07-2017

ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಪರಪ್ಪನ ಅಗ್ರಹಾರದ, ಕೇಂದ್ರ ಕಾರಾಗೃಹದಲ್ಲಿನ ಅವ್ಯವಹಾರ ಅರೋಪದ ಕುರಿತು, ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದಲ್ಲಿ ತನಿಖೆ ಅರಂಭವಾಗಿದ್ದೂ, ಕಾರಾಗೃಹದಲ್ಲಿ ಹಲವು ಮಹತ್ತರವಾದ ದಾಖಲೆಗಳನ್ನು ಕಲೆ ಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರಕರಣದ ಸಂಬಂಧ ಸಂಪೂರ್ಣವಾಗಿ ತನಿಖೆ ನಡೆಸಲಾಗುತ್ತದೆ. ಎಲ್ಲವನ್ನು ತನಿಖೆಗೊಳಪಡಿಸಿದ ಬಳಿಕ, ವರದಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ನೀಡಲಾಗುತ್ತದೆ ಎಂದಿದ್ದಾರೆ. ಆದಷ್ಟು ಬೇಗ ಕಾರಾಗೃಹದ ಅವ್ಯವಹಾರ ಕುರಿತು ತನಿಖೆ ಮುಗಿಸುತ್ತೇವೆ ಎಂದು, ತನಿಖಾಧಿಕಾರಿ ವಿನಯ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ