ಮಳೆಯ ಅಬ್ಬರಕ್ಕೆ ಧರೆಗುರುಳಿದ ಮರ !

Kannada News

20-07-2017

ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದೂ, ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ, ಮರವೊಂದು ಧರೆಗುರುಳಿದೆ. ಮೈಸೂರು-ಬಂಟ್ವಾಳ ರಾಜ್ಯ ಹೆದ್ದಾರಿಯ, ಬಾಳೆ ಕಾಡುವಿನಲ್ಲಿ ಬೃಹತ್ ಮರ ಉರುಳಿದ್ದಿದ್ದೂ, ಈ ಮಾರ್ಗದಲ್ಲಿ ಪ್ರಯಾಣಿಸುವ ವಾಹನಗಳಿಗೆ ತಡೆ ಉಂಟಾಗಿತ್ತು. ಬೆಳಗ್ಗೆ 4 ಗಂಟೆಯಿಂದ 8 ಗಂಟೆಯವರಗೆ ರಾಜ್ಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮರವನ್ನು ಸಾರ್ವಜನಿಕರೇ ತೆರವುಗೊಳಿಸಿ, ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇನ್ನು ಮೈಸೂರುನಲ್ಲಿಯೂ ಭಾರಿ ಮಳೆ ಮುಂದುವರಿದಿದ್ದೂ, ಕಬಿನಿ ಜಲಾಶಯದ ಒಳಹರಿವು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ.


ಸಂಬಂಧಿತ ಟ್ಯಾಗ್ಗಳು

ಮಳೆಯ ಅಬ್ಬರಕ್ಕೆ ಧರೆಗುರುಳಿದ ಮರ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ