ಹಿಂದಿ ನಾಮಫಲಕಕ್ಕೆ ಮಸಿ !

Kannada News

20-07-2017

ಬೆಂಗಳೂರು: ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ಭಾಷೆ ಹೇರಿಕೆ ವಿರೋಧಿಸಿ, ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಒತ್ತಾಯಪೂರ್ವಕವಾಗಿ ಬೆಂಗಳೂರು ಮೆಟ್ರೋದಲ್ಲಿ, ಹಿಂದಿ ಹೇರಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣದ  ಹಿಂದಿ ನಾಮಫಲಕಕ್ಕೆ ಮಸಿ ಬಳಿಯುವ ವೇಳೆ, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಕನ್ನಡ ಪ್ರಕಾಶ್ ನೇತೃತ್ವದಲ್ಲಿ ಕನ್ನಡ ಸಂಘಟನೆಯ ಕಾರ್ಯಕರ್ತರು ಮೆಟ್ರೋ ಮುಂಭಾಗ ಕುಳಿತು ಪ್ರತಿಭಟನೆ ಮುಂದುವರಿಸಿ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


ಸಂಬಂಧಿತ ಟ್ಯಾಗ್ಗಳು

ಬೆಂಗಳೂರು ಹಿಂದಿ ನಾಮಫಲಕಕ್ಕೆ ಮಸಿ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ