ಮರಕ್ಕೆ ಆಟೋ ಡಿಕ್ಕಿ ಮಗು ಸಾವು

Kannada News

20-07-2017 323

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಆಟೋ ಡಿಕ್ಕಿ ಹೊಡೆದ ಪರಿಣಾಮ, 10 ತಿಂಗಳ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನೆಡೆದಿದೆ. ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿವೆ. ಚಿತ್ರದುರ್ಗ ಜಿಲ್ಲೆಯ, ಹೊಸದುರ್ಗ ತಾಲ್ಲೂಕಿನ ತೋಟದಮನೆ ಬಳಿ ಈ ದುರ್ಘಟನೆ ಸಂಭವಿಸಿದೆ. ಬೋವಿಹಟ್ಟಿ ನಿವಾಸಿ ಸುಜಾತ(36) ಸ್ಥಳದಲ್ಲೇ ಸಾವನ್ನಪ್ಪಿದ್ದೂ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ 10 ತಿಂಗಳ ಮಗು ಮೃತಪಟ್ಟಿದೆ. ಇನ್ನು ಗಾಯಗೊಂಡ  ಇತರೆ 8 ಮಂದಿಯನ್ನು ಹೊಸದುರ್ಗದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ