ಬಾಲಕನನ್ನು ವಿವಸ್ತ್ರಗೊಳಿಸಿ ಹಲ್ಲೆ !

Kannada News

20-07-2017

ಲಖನೌ: 14 ವರ್ಷದ ಬಾಲಕನನ್ನು ಕಿಡಿಗೇಡಿಗಳು ಆಟಕ್ಕೆಂದು ಕರೆದು, ಬಳಿಕ ಆತನನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿರುವ ಅಮಾನವೀಯ ಘಟನೆ, ಉತ್ತರ ಪ್ರದೇಶದ ಅಲಿಗಢ್‌‌ ನ ಪಿಲ್ಖಾನಾ ಗ್ರಾಮದಲ್ಲಿ ನಡೆದಿದೆ. ಬಾಲಕನನ್ನು ಕಟ್ಟಿಹಾಕಿ ಮನಬಂದಂತೆ ಥಳಿಸಿದ್ದಲ್ಲದೇ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಬಾಲಕನ ನೆರೆಹೊರೆಯ ಕೆಲ ಯುವಕರು ಈ ದುಷ್ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ, ಬಾಲಕನಿಗೆ ಹಿಂಸೆ ನೀಡಿರುವ ದೃಶ್ಯವನ್ನು ವಿಡಿಯೋ ಕೂಡ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ಸಂಬಂಧ ಅಲಿಗಢ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ, ಈ ಕುರಿತು ಪೊಲೀಸರು ಹೆಚ್ಚಿನ ತನಿಖೆಯನ್ನು ಮುಂದುವರೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ