ಪಾಕ್ ಮಗುವಿಗೆ ಭಾರತದಲ್ಲಿ ಮರುಜೀವ !

Kannada News

20-07-2017

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರವಿನಿಂದ ಪಾಕಿಸ್ತಾನದ 4 ತಿಂಗಳ ಮಗು ರೋಹಾನ್ ಗೆ ಮರುಜೀವ ಸಿಕ್ಕಿದೆ. ನೊಯ್ಡಾದ ಜೈಪೀ ಆಸ್ಪತ್ರೆಯಲ್ಲಿ ಮಗುವಿಗೆ ಯಶಸ್ವಿ, ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮಗುವನ್ನು ಚಿಕಿತ್ಸೆಗಾಗಿ ಭಾರತಕ್ಕೆ ಕರೆತರಲು ಸುಷ್ಮಾ ಸ್ವರಾಜ್ ಸಹಾಯ ಮಾಡಿದ್ದರು. ಮಗುವಿನ ಪೋಷಕರಿಗೆ ವೀಸಾ ವ್ಯವಸ್ಥೆ ಮಾಡಿಸಿದ್ದರು. ಮಗು ಚೇತರಿಸಿಕೊಂಡ ಹಿನ್ನೆಲೆಯಲ್ಲಿ, ಮಗುವಿನ ತಂದೆ ಕನ್ವಾಲ್ ಸಿದ್ದಿಕ್, ಸುಷ್ಮಾ ಸ್ವರಾಜ್ ಅವರಿಗೆ ಧನ್ಯವಾದ ಹೇಳಿದ್ದಾರೆ. ಭಾರತ ನಮಗೆ ಮನೆಯಿದ್ದಂತೆ. ಈ ಖುಷಿಯನ್ನು ಇಡೀ ಜಗತ್ತಿನೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಪಾಕಿಸ್ತಾನದಿಂದ ಕರೆತಂದಾಗ ಮಗುವಿನ ಸ್ಥಿತಿ ಚಿಂತಾಜನಕವಾಗಿತ್ತು. ಮಗುವಿನ ಹೃದಯದಲ್ಲಿ ರಂಧ್ರವಿತ್ತು, ಜೊತೆಗೆ ನರಗಳಲ್ಲೂ ಸಮಸ್ಯೆಯಿತ್ತು. ಪಾಕಿಸ್ತಾನದಲ್ಲಿ ಅದಕ್ಕೆ ಸೂಕ್ತ ಚಿಕಿತ್ಸೆ ಲಭ್ಯವಿರಲಿಲ್ಲ. ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ಭಾರತದ ವೈದ್ಯರು ಯಶಸ್ವಿಯಾಗಿ ಮಾಡಿದ್ದಾರೆ. ಆಪರೇಷನ್ ಮಾಡಿ ಒಂದು ತಿಂಗಳ ಬಳಿಕ ಮಗುವನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ