ಪ್ರಾಣಕ್ಕೆ ಕುತ್ತು ತಂದ ಜಾಲಿ ರೈಡ್

Kannada News

20-07-2017

ಬೆಂಗಳೂರು: ಚಿಕ್ಕಜಾಲದ ಕಟ್ಟಿಗೇನಹಳ್ಳಿಯ ಬಳಿ  ಪೈಪೋಟಿ ಮೇಲೆ ಬುಲೆಟ್ ಬೈಕ್‍ಗಳನ್ನು ಓಡಿಸಿಕೊಂಡು ಹೋಗುತ್ತಿದ್ದ ಇಬ್ಬರು ಬಿಬಿಎಂ ವಿದ್ಯಾರ್ಥಿಗಳು ಪರಸ್ಪರ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಬೆಟ್ಟಲಸೂರಿನ ಮೋನಿಶ್‍ಗೌಡ (19)ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಸೊಣ್ಣಪ್ಪನಹಳ್ಳಿಯ ಭಾರ್ಗವ (20) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ರೇವಾ ಕಾಲೇಜಿನಲ್ಲಿ ಬಿಬಿಎಂ ಓದುತ್ತಿದ್ದ ಈ ಇಬ್ಬರು ಸ್ನೇಹಿತರಾಗಿದ್ದು, ನಿನ್ನೆ ಮಧ್ಯಾಹ್ನ ಕಾಲೇಜು ಮುಗಿಸಿಕೊಂಡು ಬುಲೆಟ್ ಬೈಕ್‍ಗಳಲ್ಲಿ ಜಾಲಿ ರೈಡ್ ಗೆ ಹೋಗಿದ್ದರು. ಬೆಟ್ಟಲಸೂರಿನ ಬಳಿ ಅತಿ ವೇಗವಾಗಿ ಹೋಗುತ್ತ ಪರಸ್ಪರ ಡಿಕ್ಕಿ ಹೊಡೆದು ಎದುರಿನ ರಸ್ತೆಗೆ ಬಿದ್ದ ಮೋನಿಶ್‍ಗೌಡನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟರೆ, ಭಾರ್ಗವ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಪ್ರಕರಣ ದಾಖಲಿಸಿರುವ ಚಿಕ್ಕಜಾಲ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ, ಎಂದು ಡಿಸಿಪಿ ಸಾರಾ ಫಾತಿಮಾ ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ