ಲೈಂಗಿಕ ಕಿರುಕುಳ: ಅಧಿಕಾರಿ ಎತ್ತಂಗಡಿ !

Kannada News

20-07-2017

ಬಳ್ಳಾರಿ: ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಯನ್ನು ಅಮಾನತು ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಜಿಲ್ಲೆಯ ಕಮಲಾಪುರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಯಾಗಿದ್ದ ಶಿವಕುಮಾರ್ ಕಟ್ಟಿಮನಿ ಅಮಾನತಾಗಿರುವ ಅಧಿಕಾರಿ. ಮಹಿಳೆಯೊಂದಿಗೆ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ ಆರೋಪಗಳು ಈತನ ವಿರುದ್ಧ ಕೇಳಿಬಂದ ಹಿನ್ನೆಲೆಯಲ್ಲಿ, ಬಳ್ಳಾರಿ ಜಿಲ್ಲಾ ನಗರಾಭಿವೃದ್ದಿ ಯೋಜನಾ ನಿರ್ದೇಶಕರು ಅಮಾನತು ಆದೇಶ ಹೊರಡಿಸಿದ್ದಾರೆ. ಇದೀಗ ಕಂಪ್ಲಿ ಪಟ್ಟಣ ಮುಖ್ಯಾಧಿಕಾರಿ ವಿಜಯಲಕ್ಷ್ಮಿಯವರಿಗೆ  ಹೆಚ್ಚುವರಿ ಜವಾಬ್ದಾರಿ ನೀಡಿದ್ದಾರೆ. ಶಿವಕುಮಾರ್ ಕಟ್ಟಿಮನಿ ಅಮಾನತು ಮಾಡಿ  ಬಸವಕಲ್ಯಾಣ ನಗರಸಭೆಗೆ ವರ್ಗಾವಣೆಮಾಡಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ