ನಾನು ಕಾಂಗ್ರೆಸ್ ತೊರೆಯಲು ಸಿಎಂ ಕಾರಣ !

Kannada News

20-07-2017

ಮೈಸೂರು: ಹಿಂದುಳಿದ ವರ್ಗಗಳ ನಾಯಕರನ್ನು ತುಳಿಯುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೆಲಸವಾಗಿದೆ, ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೆ.ಪಿ ನಂಜುಂಡಿ ಮೈಸೂರಿನಲ್ಲಿ ಸಿಎಂ ವಿರುದ್ಧ, ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಹಿಂದುಳಿದ ವರ್ಗಗಳ ನಾಯಕರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು. ನಾನು 16 ವರ್ಷ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಿದರೂ ಸೂಕ್ತ ಸ್ಥಾನಮಾನ ನೀಡದೇ ಕಡೆಗಣಿಸಲಾಯಿತು. ಇದರಿಂದ ಬೇಸತ್ತು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದೆ. ನಾನು ಕಾಂಗ್ರೆಸ್ ತೊರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ ಕಾರಣರಾಗಿದ್ದಾರೆ ಎಂದು ನೇರವಾಗೇ ಹೇಳಿದ್ದಾರೆ. ಕಾಂಗ್ರೆಸ್ ನಲ್ಲಿರುವ ಪ್ರಭಾವಿ ಹಿಂದುಳಿದ ನಾಯಕರನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾಣತನದಿಂದ ಓಡಿಸುತ್ತಿದ್ದಾರೆ, ನನಗೆ ಹಾಗೂ ನನ್ನ ಸಮಾಜಕ್ಕೆ ಧಕ್ಕೆ ಬಂದ ಕಾರಣ, ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಗೆ ಸೇರ್ಪಡೆಯಾಗಿದ್ದೇನೆ ಎಂದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ