ಖೈದಿ ಆತ್ಮಹತ್ಯೆ !

Kannada News

21-07-2017

ಮಂಡ್ಯ: ಮಂಡ್ಯ ಜೈಲಿನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ರಾಘವೇಂದ್ರ (34) ಆತ್ಮಹತ್ಯೆ ಮಾಡಿಕೊಂಡ ಖೈದಿ. ಜೈಲಿನ ಶೌಚಾಲಯದ ಕಂಬಿಗೆ ಬೆಡ್‌ ಶೀಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರಗಳವು ಪ್ರಕರಣದಲ್ಲಿ ಜೈಲು ಸೇರಿದ್ದ ರಾಘವೇಂದ್ರ, ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ, ಜೈಲಿಗೆ ಭೇಟಿ ನೀಡಿದ ಎಸ್.ಪಿ,  ಜಿ.ರಾಧಿಕಾ ಅವರು ಮಾಹಿತಿ ಪಡೆದುಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ