ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ !

Kannada News

21-07-2017

ಉಡುಪಿ: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾನದ ಮೇಲೆ ದಾಳಿ ನಡೆಸಿದ ಪೊಲೀಸರು ಸುಮಾರು 27 ಗೋವುಗಳನ್ನು ರಕ್ಷಿಸಿದ್ದಾರೆ. ಘಟನೆಯು ಕುಂದಾಪುರದ ಮಾವಿನ ಕಟ್ಟೆ ಬಳಿ ನಡೆದಿದೆ. ಪಿಕಪ್ ವಾಹನದಲ್ಲಿ ಗೋವುಗಳ ಕಾಲುಗಳನ್ನು ಕಟ್ಟಿ ಅಮಾನವೀಯವಾಗಿ ತುಂಬಿಕೊಂಡು ಸಾಗಾಟ ಮಾಡುತ್ತಿದ್ದ, ಖಚಿತ ಮಾಹಿತಿ ಮೇರೆಗೆ ವಾಹನ ಅಡ್ಡಗಟ್ಟಿದ ಪೊಲೀಸರು ಗೋವುಗಳನ್ನು ರಕ್ಷಿಸಿದ್ದಾರೆ. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಚಾಲಕ ಮತ್ತು ಇನ್ನಿಬ್ಬರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಇನ್ನು ಗೋವುಗಳನ್ನು ತುಂಬಿಕೊಂಡಿದ್ದ ವಾಹನದಲ್ಲೇ ಒಂದು ಹಸು ಸಾವನ್ನಪ್ಪಿದೆ. ಕುಂದಾಪುರದಿಂದ ಮಂಗಳೂರಿಗೆ ಗೋವುಗಳ ಅಕ್ರಮ ಸಾಗಾಟ ಮಾಡಲಾಗುತ್ತಿದೆ, ಎಂಬ  ಅನುಮಾನದ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ