ಕಂಬಕ್ಕೆ ಬೈಕ್ ಡಿಕ್ಕಿ ವ್ಯಕ್ತಿ ಸಾವು !

Kannada News

21-07-2017

ಬೆಂಗಳೂರು: ನಗರದ ಜಾಲಹಳ್ಳಿಯ ಸೋಲದೇವನಹಳ್ಳಿ ಬಳಿ, ಗುರುವಾರ ಮಧ್ಯರಾತ್ರಿ ಪಾರ್ಟಿ ಮುಗಿಸಿಕೊಂಡು ಅತಿ ವೇಗವಾಗಿ ಬೈಕ್ ಓಡಿಸಿಕೊಂಡು ಹೋಗುತ್ತಿದ್ದ, ವ್ಯಕ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತ ವ್ಯಕ್ತಿ, ಯಶವಂತಪುರದ ಲಕ್ಷ್ಮಿನಾರಾಯಣ ಕಾಲೋನಿಯ ವಿನಾಯಕ (25) ಎಂದು ಗುರುತಿಸಲಾಗಿದೆ. ರಾತ್ರಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ಹೋಗಿದ್ದ ವಿನಾಯಕ್, ಪಾರ್ಟಿ ಮುಗಿಸಿಕೊಂಡು ಮನೆಗೆ ಸಿಡಿ-100 ಬೈಕ್‍ನಲ್ಲಿ ವೇಗವಾಗಿ ವಾಪಸ್ಸಾಗುತ್ತಿದ್ದರು. ಮಾರ್ಗಮಧ್ಯೆ ಸೋಲದೇವನಹಳ್ಳಿಯ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಜಾಲಹಳ್ಳಿ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ