ಶಾಲಾ ಬಾಲಕರಿಂದ ಅತ್ಯಾಚಾರಕ್ಕೆ ಯತ್ನ !

Kannada News

21-07-2017

ಬೆಂಗಳೂರು: ನಗರದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕರಿಂದಲೇ 11 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಸಿರುವ, ಕೃತ್ಯ ನಡೆದಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ರಾಮಮೂರ್ತಿ ನಗರದಲ್ಲಿ ಪರಿಚಯಸ್ಥ 11 ವರ್ಷದ ಬಾಲಕಿಯ ಮೇಲೆ ಐವರು ಅಪ್ರಾಪ್ತ, ಶಾಲಾ ಬಾಲಕರು ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸಿದ್ದ, ಐವರು ಬಾಲಕರನ್ನು ಇಂದು ಬೆಳಗಿನ ಜಾವ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾವು ಓದುತ್ತಿದ್ದ ಶಾಲೆಯಲ್ಲೇ, ಓದುತ್ತಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ ಕಾಮುಕರು, ಬಾಲಕಿ ಮನೆಗೆ ತೆರಳುತ್ತಿದ್ದಾಗ ಆಕೆಯನ್ನು ವಿಜನಾಪುರದ ಸರ್ವಿಸ್ ರಸ್ತೆಯಿಂದ ಸ್ಮಶಾನಕ್ಕೆ ಕರೆದುಕೊಂಡು ಹೋಗಿದ್ದಾರೆ. ಬಾಲಕಿಯ ಅಂಗಾಂಗ ಮುಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ ಬಾಲಕರು, ಆಕೆಗೆ ಮುತ್ತು ಕೊಟ್ಟು, ಮೈಮೇಲೆ ಗುಟಕಾ ಉಗುಳಿ ಕಿರುಕುಳ ನೀಡಿದ್ದರು. ಬಾಲಕಿಯು ರಕ್ಷಣೆಗಾಗಿ ಕೂಗಿಕೊಂಡಿದ್ದರಿಂದ ಶಬ್ದ ಕೇಳಿದ ಸ್ಥಳೀಯರು ಸ್ಥಳಕ್ಕೆ ಬರುತ್ತಿರುವುದನ್ನು ಕಂಡ ಬಾಲಕರು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಬಾಲಕಿ ಮನೆಗೆ ತೆರಳಿ ತಾಯಿಯ ಬಳಿ ಕೃತ್ಯವನ್ನು ಹೇಳಿಕೊಂಡಿದ್ದಾಳೆ. ಕೂಡಲೇ ಬಾಲಕಿಯ ತಾಯಿ ರಾಮಮೂರ್ತಿ ನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿಯನ್ನು ವೈದ್ಯಕೀಯ ತಪಾಸಣೆ ನಡೆಸಿ, ಬಾಲಕಿ ನೀಡಿದ ಮಾಹಿತಿ ಆಧರಿಸಿ ಕೃತ್ಯವೆಸಗಿದ ಐವರು ಬಾಲಾಪರಾಧಿಗಳನ್ನು ವಶಕ್ಕೆ ತೆಗೆದುಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ