ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ !

Kannada News

22-07-2017

ಕಾರವಾರ: ವಿವಾಹಿತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ, ಕಳೆದ ರಾತ್ರಿ ನಡೆದಿದೆ. ವೀಣಾ ಶಿವರಾಮ ನಾಯ್ಕ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಇದೆ ವರ್ಷದ ಫೆಬ್ರವರಿಯಲ್ಲಿ ಆಕೆಯ ಮದುವೆಯಾಗಿತ್ತು. ಆಕೆ ಗಂಡನೊಂದಿಗೆ ಸಂತೋಷದಿಂದ ಇದ್ದಿರಲಿಲ್ಲ, ಎಂಬುದಾಗಿ ಆಕೆಯ ತಾಯಿ ಮನೆಯವರು ತಿಳಿಸಿದ್ದು, ಇದನ್ನೆ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಳೆದ 15 ದಿನದಿಂದ ತವರು ಮನೆಯಲ್ಲಿ ವಾಸವಿದ್ದಿದ್ದ ಮಹಿಳೆ, ನಿನ್ನೆ ರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ತಹಶೀಲ್ದಾರ ವಿ.ಎನ್ ಬಾಡ್ಕರ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ. ಅಗ್ನಿಶಾಮಕ ದಳದವರು ಮೃತ ದೇಹವನ್ನು ಬಾವಿಯಿಂದ ತೆಗೆದು ಮರಣೋತ್ತರ ಪರೀಕ್ಷೆಗಾಗಿ, ಭಟ್ಕಳ ತಾಲ್ಲೂಕು ಆಸ್ಪತ್ರೆಗೆ ರವಾನಿಸಿದ್ದೂ, ಭಟ್ಕಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ