ಶರತ್ ಹತ್ಯೆ: ರಮಾನಾಥ ರೈ ಅವರ ಕೈವಾಡ...?

Kannada News

22-07-2017

ಮೈಸೂರು: ದಕ್ಷಿಣ ಕನ್ನಡದಲ್ಲಿ ಇತ್ತೀಚೆಗೆ ನಡೆದಿರುವ ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯ ಹಿಂದೆ ಸಚಿವ ರಮಾನಾಥ ರೈ ಕೈವಾಡವಿದೆ, ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರು ಆರೋಪಿಸಿದ್ದಾರೆ. ಮೈಸೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದನಂತರ 24 ಮಂದಿ, ಹಿಂದೂಪರ ಸಂಘಟನೆಗಳ ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆ ನಡೆದಿದೆ. ಇದಕ್ಕೆಲ್ಲಾ ಕಾಂಗ್ರೆಸ್ ಪಕ್ಷದ ಕುಮ್ಮಕ್ಕು ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಈ ರೀತಿ ಕಾಂಗ್ರೆಸ್ ಕಾರ್ಯಕರ್ತರ ಕೊಲೆಗಳು ನಡೆದಿಲ್ಲ, ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದನಂತರ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲಾಗುತ್ತಿದೆ ಎಂದರು. ಇನ್ನು ಶರತ್ ಮಡಿವಾಳ ಹತ್ಯೆ ಆರೋಪಿಗಳನ್ನು ಬಂಧಿಸುವ ವ್ಯವಧಾನವಿಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು. ಬೆಂಗಳೂರಿನಲ್ಲಿ ನಡೆದ ರುದ್ರೇಶ್ ಹತ್ಯೆ ಬಳಿಕ ರಾಜ್ಯ ಸರ್ಕಾರ ನೀಡಿದ್ದ ಭರವಸೆ ಹುಸಿಯಾಗಿದೆ, ಆದ್ದರಿಂದ ಶರತ್ ಮಡಿವಾಳ ಹತ್ಯೆ ಪ್ರಕರಣವನ್ನು ಎನ್.ಐ.ಎ ತನಿಖೆಗೆ ವಹಿಸಬೇಕು ಎಂದು ಇದೇ ವೇಳೆ ಆಗ್ರಹಿಸಿದ್ದಾರೆ. ಸಚಿವ ರಮಾನಾಥ ರೈ ವಿವಿಧ ಧರ್ಮಗಳ ಪ್ರಾರ್ಥನಾ ಮಂದಿರಗಳಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರೆ ಕೊಲೆ ಆರೋಪಿಗಳು ಸಿಗುವುದಿಲ್ಲ ಎಂದು ವ್ಯಂಗವಾಡಿದರು. ಸಚಿವ ರಮಾನಾಥ ರೈ ಕಳ್ಳ ನಾಟಕವಾಡುತ್ತಿದ್ದು, ಇದೊಂದು ರೀತಿಯಲ್ಲಿ ಕಣ್ಣೊರೆಸುವ ತಂತ್ರವಾಗಿದೆ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ