ಕೆರೆಗಳನ್ನು ಮಾರುಲು ಹೊರಟಿದ್ದಾರೆ ಸಿಎಂ...?

Kannada News

22-07-2017

ಮೈಸೂರು: ಕೆರೆಗಳ ಡಿ ನೋಟಿಫೈಗೆ ವಿರೋಧ ವ್ಯಕ್ತವಾಗುತ್ತಿರುವುದರಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು, ಮಾಜಿ ಸಂಸದ ಎಚ್. ವಿಶ್ವನಾಥ್ ಆರೋಪಿಸಿದ್ದಾರೆ. ಮೈಸೂರಿನಲ್ಲಿಂದು ಮಾತನಾಡಿದ ಅವರು, ಇದಕ್ಕೆ ಪುಷ್ಠಿ ನೀಡುವಂತೆ ಲಿಂಗಾಯತ ಹಾಗೂ ವೀರಶೈವ ಧರ್ಮ ಬೇರೆ ಬೇರೆ ಎಂಬ ಬೇಧಭಾವನ್ನು ರಾಜ್ಯ ಸರ್ಕಾರ ಹುಟ್ಟು ಹಾಕುತ್ತಿದೆ, ರಾಜ್ಯಕ್ಕೆ ಪ್ರತ್ಯೇಕ ಧ್ವಜ ಬೇಕೆಂದು ಸಮಿತಿ ರಚಿಸಲಾಗಿದೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಿಕೊಳ್ಳಲು ಈ ರೀತಿಯ ವಿವಾದಗಳನ್ನು ಹುಟ್ಟು ಹಾಕಲಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ  ಆರೋಪಿಸಿದ್ದಾರೆ. ಕೆರೆಗಳನ್ನು ಮುಚ್ಚುವ ಸರ್ಕಾರದ ನಿರ್ಧಾರಕ್ಕೆ ಮಾಜಿ ಸಂಸದ ಎಚ್.ವಿಶ್ವನಾಥ್ ವಿರೋಧ ವ್ಯಕ್ತಪಡಿಸಿದ್ದಾರೆ. ಕೆರೆ ಒತ್ತುವರಿ ತೆರವುಗೊಳಿಸುವ ಪರಮಾಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ನೀಡಿದೆ. ಆದರೆ ಕರ್ನಾಟಕ ಸಚಿವ ಸಂಪುಟದ ನಿರ್ಧಾರ ಪ್ರಜಾಪ್ರಭುತ್ವದ ಆಶಯಗಳಿಗೆ ವಿರೋಧಿಯಾಗಿದೆ ಎಂದರು. ಜನ ಕುಡಿಯುವ ನೀರಿಲ್ಲದೆ ಕಷ್ಟಪಡುತ್ತಿದ್ದಾರೆ, ಹೀಗಿರುವಾಗ ಕೆರೆ ಮುಚ್ಚಿ ರಿಯಲ್ ಎಸ್ಟೇಟ್ ಮಾಡುವ ಹುನ್ನಾರ ಮಾಡುತ್ತಿದ್ದಾರೆ. ಇದು ಅಕ್ಷಮ್ಯ ಅಪರಾಧ ಎಂದ ಅವರು, ಪ್ರಜಾಪ್ರಭುತ್ವದ ಮಹಾರಾಜ ಸಿದ್ದರಾಮಯ್ಯ ಕೆರೆಗಳನ್ನು ಮಾರುವುದಕ್ಕೆ ಹೊರಟಿದ್ದಾರೆ ಎಂದು ಸಿಎಂ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ