ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ !

Kannada News

24-07-2017

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಕಾರಿನ ಚಾಲಕ ಸೇರಿದಂತೆ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದೆ. ಜಿಲ್ಲೆಯ ಕುಮಟಾ ತಾಲ್ಲೂಕಿನ, ದಿವಗಿ ಬಳಿ  ಅಪಘಾತ ನಡೆದಿದ್ದೂ, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಮಹಿಳೆ ಶಶಿಕಲಾ(52) ಎಂದು ತಿಳಿದು ಬಂದಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಮಂಗಳೂರು ಮೂಲದವರು ಎನ್ನಲಾದ, ಇವರು ಕುಟುಂಬದೊಂದಿಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ