ಪ್ರವೀಣ್ ಖಾಂಡ್ಯಗೆ ಸುಪ್ರೀಂ ನೋಟಿಸ್ !

Kannada News

24-07-2017 199

ನವದೆಹಲಿ: ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದ ಡಿವೈಎಸ್‍ಪಿ ಕಲ್ಲಪ್ಪ ಹಂಡಿಬಾಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರವೀಣ್ ಖಾಂಡ್ಯ ಅವರಿಗೆ ಸರ್ವೋಚ್ಚ ನ್ಯಾಯಾಲಯ ನೋಟಿಸ್ ನೀಡಿದೆ. ಕಲ್ಲಪ್ಪ ಹಂಡಿಬಾಗ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರವೀಣ್ ಖಾಂಡ್ಯಗೆ ಉಚ್ಚ ನ್ಯಾಯಾಲಯ ಜಾಮೀನು ನೀಡಿತ್ತು. ಉಚ್ಚ ನ್ಯಾಯಾಲಯದ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಪ್ರವೀಣ್ ಖಾಂಡ್ಯಗೆ ನೋಟೀಸ್ ಜಾರಿ ಮಾಡಿದೆ.

 




ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ