ಸಿಇಒ ವಿರುದ್ಧ ಸಚಿವ ಗರಂ !

Kannada News

24-07-2017

ಧಾರವಾಡ: ಚೆಕ್ ಡ್ಯಾಂ ನಿರ್ಮಾಣದಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರಾದ, ವಿನಯ್ ಕುಲಕರ್ಣಿ, ಧಾರವಾಡದ ಕೆಡಿಪಿ ಸಭೆಯಲ್ಲಿ ಸಿಇಒ ವಿರುದ್ಧ ಸಚಿವರು ಗರಂ ಆದರು. ಕೆಲಸ ಮಾಡದ ಅಧಿಕಾರಿಗಳಿಗೆ ಮೆಮೋ ಹೊರಡಿಸಿ, ಕೆಲಸದಿಂದ ಸಸ್ಪೆಂಡ್ ಮಾಡಿ ಎಂದು ತಾಕೀತು ಮಾಡಿದ್ದಾರೆ. ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ, ಬ್ಯಾರೇಜ್ ನಿರ್ಮಾಣ ಮಾಡೋದಕ್ಕೆ ಎಷ್ಟು ಸಮಯ ಬೇಕು ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಕೂಡಲೇ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡು, ಚೆಕ್ ಡ್ಯಾಂ ನಿರ್ಮಾಣ ಕಾರ್ಯ ಪೂರ್ಣಗೊಳಿಸುವಂತೆ ಆದೇಶಿಸಿದ್ದಾರೆ. ಎಂಜಿನಿಯರ್ ಗಳಿಗೆ ಜವಾಬ್ದಾರಿ ಬೇಕು. ಒಂದು ಕುರಿ ನೀರು ಕುಡಿಯೋಕೆ ಏಳೆಂಟು ಕಿಮೀ ಹೋಗಬೇಕಾದ ಪರಿಸ್ಥಿತಿ ಇದೆ, ಇನ್ನಾದರೂ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಿ ಎಂದು ಹೇಳಿದ್ದಾರೆ.

 

 


ಸಂಬಂಧಿತ ಟ್ಯಾಗ್ಗಳು

ಧಾರವಾಡ ಸಿಇಒ ವಿರುದ್ಧ ಸಚಿವ ಗರಂ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ