ಕಾರು ಡಿಕ್ಕಿ ಪೌರಕಾರ್ಮಿಕರ ದುರ್ಮರಣ !

Kannada News

24-07-2017

ಬೆಂಗಳೂರು: ರಾಮನಗರದ ಜಿಲ್ಲಾ ಪಂಚಾಯತ್ ಭವನದ ಮುಂಭಾಗ, ವೇಗವಾಗಿ ಬಂದ ಕಾರು ಹರಿದು ಇಬ್ಬರು ಪೌರಕಾರ್ಮಿಕರು ಮೃತಪಟ್ಟಿರುವ ದುರ್ಘಟನೆ  ಸಂಭವಿಸಿದೆ. ಮೃತಪಟ್ಟವರನ್ನು ರಾಮನಗರದ ಸೋಮಶೇಖರ್ (34) ಚಿನ್ನು (28) ಎಂದು ಗುರುತಿಸಲಾಗಿದೆ. ಸೊಳ್ಳೆಗಳ ನಿಯಂತ್ರಣಕ್ಕೆ ಇವರಿಬ್ಬರೂ ಫಾಗಿಂಗ್ ಸಿಂಪಡಿಸಿ, ಜಿಲ್ಲಾ ಪಂಚಾಯತ್ ಭವನದದ ರಸ್ತೆ ಬದಿಯಲ್ಲಿ ಬರುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಗುತ್ತಿಗೆ ಪೌರಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.  ರಾಮನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾರು ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ