ಜನೌಷಧ ಕೇಂದ್ರದಲ್ಲಿ ಕಳ್ಳತನ !

Kannada News

24-07-2017

ಬೆಂಗಳೂರು: ದೇವನಹಳ್ಳಿಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿರುವ, ಪ್ರಧಾನಮಂತ್ರಿ ಜನೌಷಧ ಕೇಂದ್ರದ, ರೋಲಿಂಗ್ ಶೆಟರ್ ಮುರಿದು ಒಳನುಗ್ಗಿರುವ ಕಳ್ಳರು 30 ಸಾವಿರ ನಗದು ಮತ್ತು ಕಾಂಡೋಮ್ ಪ್ಯಾಕೆಟ್‍ಗಳನ್ನು ದೋಚಿ ಪರಾರಿಯಾಗಿದ್ದಾರೆ. ಪ್ರಧಾನಮಂತ್ರಿ ಜನೌಷಧ ಕೇಂದ್ರದ ಶೆಟರ್ ಮುರಿದು ಒಳನುಗ್ಗಿದ ಕಳ್ಳರು, ಅಲ್ಲಿದ್ದ ಔಷಧಿಗಳನ್ನು ಚೆಲ್ಲಾಪಿಲ್ಲಿ ಮಾಡಿ ಗಲ್ಲಾ ಪೆಟ್ಟಿಗೆ ಒಡೆದು 30 ಸಾವಿರ ನಗದು ಹಾಗೂ ಕೇಂದ್ರದಲ್ಲಿದ್ದ ಎಲ್ಲಾ ನಿರೋಧ್ ಪ್ಯಾಕೆಟ್‍ಗಳನ್ನ ಕಳವು ಮಾಡಿ ಪರಾರಿಯಾಗಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ದೇವನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಹತ್ತಿರದ ಸಿಸಿ ಟಿವಿ ದೃಶ್ಯಗಳನ್ನು ಅವಲೋಕಿಸಿ ದುಷ್ಕರ್ಮಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ