ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ !

Kannada News

25-07-2017

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಕಾಫಿಡೇ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನೇಣಿಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ನಿವಾಸಿ ಪ್ರಮೋದ್ ಮೃತ ವ್ಯಕ್ತಿ, ಎಂದು ತಿಳಿದು ಬಂದಿದೆ. ಮಹದೇವಪುರದ ಫಿನಿಕ್ಸ್ ಕಾಫಿಡೇ ನಲ್ಲಿ ಕೆಲಸ ಮಾಡುತ್ತಿದ್ದ ಪ್ರಮೋದ್, ಸ್ನೇಹಿತನ ರೂಮಿನಲ್ಲಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಮಹದೇವಪುರ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ