ತುಮಕೂರು-ಬೆಂಗಳೂರು ರಸ್ತೆ ತಡೆದು ಪ್ರತಿಭಟನೆ !

Kannada News

25-07-2017

ಬೆಂಗಳೂರು: ತುಮಕೂರು-ಬೆಂಗಳೂರು ರಸ್ತೆಯಲ್ಲಿ ಸಂಚರಿಸುವ ಬಹುತೇಕ ಕೆ.ಎಸ್.ಆರ್‍.ಟಿ.ಸಿ. ಬಸ್‍ಗಳು ಸರ್ವೀಸ್ ರಸ್ತೆಗೆ ಬರದೇ, ಹೆದ್ದಾರಿಯ ಟೋಲ್ ರಸ್ತೆಯಲ್ಲಿ ಸಂಚರಿಸುತ್ತಿರುವುದನ್ನ ವಿರೋಧಿಸಿ ವಿದ್ಯಾರ್ಥಿಗಳು ಹಾಗೂ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಹೊರವಲಯದ ನೆಲಮಂಗಲ ಪಟ್ಟಣದ ಕುಣಿಗಲ್ ಬೈಪಾಸ್ ಬಳಿ, ಬೆಳಿಗ್ಗೆ ವಿದ್ಯಾರ್ಥಿಗಳು ಹಾಗೂ ಕನ್ನಡಪರ ಸಂಘಟನೆಯ ಕಾರ್ಯಕರ್ತರು ನೂರಾರು ಮಂದಿ ಸೇರಿ, ಸುಮಾರು 25 ಕ್ಕೂ ಹೆಚ್ಚು ಕೆ.ಎಸ್.ಆರ್‍.ಟಿ.ಸಿ. ಬಸ್‍ಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಕೆ.ಎಸ್.ಆರ್‍.ಟಿ.ಸಿ. ಅಧಿಕಾರಿಗಳು ಸಾವಿರಾರು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲು ಎಲ್ಲಾ ಬಸ್‍ಗಳನ್ನ ಸರ್ವೀಸ್ ರಸ್ತೆಯಲ್ಲಿ ಸಂಚಾರ ಮಾಡುವಂತೆ ಅನುವು ಮಾಡಿಕೊಡಬೇಕೆಂದು ಪ್ರತಿಭಟನಕಾರರು ಒತ್ತಾಯಿಸಿದ್ದಾರೆ. ಈ ವೇಳೆ ಪ್ರತಿಭಟನಕಾರರು ಹಾಗೂ ಬಸ್ ಚಾಲಕರ ನಡುವೆ ಮಾತಿನ ಚಕಮುಕಿ ನಡೆದು ಓರ್ವ ನಿರ್ವಾಹಕನಿಗೆ ಥಳಿಸಿರುವ ಘಟನೆ ಕೂಡ ನಡೆದಿದೆ. ಹೀಗಾಗಿ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಕೆಲಕಾಲ ಪರದಾಡುವಂತಾಗಿತ್ತು. ಕೂಡಲೇ ಸ್ಥಳಕ್ಕೆ ನೆಲಮಂಗಲ ಪಟ್ಟಣ ಸಂಚಾರ ಪೊಲೀಸರು ಭೇಟಿ ನೀಡಿ, ಪ್ರತಿಭಟನಾಕಾರರ ಮನವೊಲಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ