ಮನೆಯಲ್ಲಿ ಗಾಂಜಾ ಬೆಳೆ: ವ್ಯಕ್ತಿ ಬಂಧನ !

Kannada News

26-07-2017

ಮೈಸೂರು: ಮೈಸೂರಿನ ಸರಸ್ವತಿಪುರಂ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ, ಮನೆಯ ಆವರಣದಲ್ಲಿಯೇ ಗಾಂಜಾ ಬೆಳೆದಿದ್ದ ವ್ಯಕ್ತಿಯೊರ್ವನನ್ನು ಬಂಧಿಸಿದ್ದಾರೆ. ಬೋಗಾದಿಯ 2ನೇ ಹಂತದ ನಿವಾಸಿ, ಜಗನ್ನಾಥ್ ಎಂಬುವರು ಬಂಧಿತ ಆರೋಪಿಯಾಗಿದ್ದಾರೆ. ಈತ ವೃತ್ತಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಎಂದು ತಿಳಿದು ಬಂದಿದೆ. ತನ್ನ ಮನೆಯಿಂದ ನೂರು ಮೀಟರ್ ದೂರದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಆರೋಪಿ, ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಸಂಶಯ ವ್ಯಕ್ತವಾಗಿದೆ. ಆರೋಪಿಯ ಮನೆಯಲ್ಲಿ ಸುಮಾರು ಐದು ಕೆ.ಜಿ.ಯಷ್ಟು ಗಾಂಜಾ ಪತ್ತೆಯಾಗಿದೆ, ಅಲ್ಲದೇ ಮನೆಯಲ್ಲಿ ಒಣಗಿಸಿಡಲಾಗಿದ್ದ ಗಾಂಜಾ ಎಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ