ಶಾಸಕನ ಕಾರಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು !

Kannada News

26-07-2017

ಬೆಳಗಾವಿ: ಗ್ರಾಮಕ್ಕೆ ಕುಡಿಯುವ ನೀರು ನೀಡುವಂತೆ ಒತ್ತಾಯಿಸಿ, ಶಾಸಕ ದುರ್ಯೋಧನ ಐಹೊಳೆ ಅವರ ಕಾರಿಗೆ ಮುತ್ತಿಗೆ ಹಾಕಿದ, ಬಂಬಲವಾಡ ಗ್ರಾಮಸ್ಥರು, ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು. ಇನ್ನು ಈ ಕುರಿತು ಮಾತನಾಡಿದ ಗ್ರಾಮಸ್ಥರು, ನಮ್ಮ ಗ್ರಾಮಕ್ಕೆ ಎಲ್ಲಾ ಸೌಲಭ್ಯ ನೀಡಿದ್ದೀರಿ, ಆದರೆ ಕುಡಿಯುವ ನೀರು ಮಾತ್ರ ನೀಡಿಲ್ಲ ಎಂದು ಕಿಡಿಕಾರಿದರು. ಕಳೆದ ನಾಲ್ಕು ವರ್ಷಗಳಿಂದ ನಾಗರಮುನ್ನೋಳಿ ಹೋಬಳಿಯಲ್ಲಿ ಮಳೆಯಾಗಿಲ್ಲ, ಇದರಿಂದಾಗಿ ಕುಡಿಯಲೂ ನೀರಿಲ್ಲದೇ ಜನರು ಪರದಾಡುವಂತಾಗಿದೆ ಎಂದರು. ಕುಡಿಯುವ ನೀರನ್ನು ಸರಿಯಾಗಿ ಸರಬರಾಜ ಮಾಡುತ್ತಿಲ್ಲ, ಇದರಿಂದ ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದೂ, ಈ ಕುರಿತು ಹಲವಾರು ಬಾರಿ ಮನವಿ ಮಾಡಿದರು, ಯಾವುದೆ ಪ್ರಯೋಜನವಾಗಿಲ್ಲ ಎಂದರು.  ರಸ್ತೆ ಕಾಮಗಾರಿಗೆ ಚಾಲನೆ ನೀಡಲು ಶಾಸಕ ದುರ್ಯೋಧನ ಐಹೊಳೆ ಅವರು, ಕುಂಗಟೋಳ್ಳಿ ಗ್ರಾಮಕ್ಕೆ ಹೋಗುತ್ತಿರುವಾಗ ವಾಹನ ತಡೆದು ಮುತ್ತಿಗೆ ಹಾಕಿ, ನೀರಿನ ಸಮಸ್ಯೆ ಬಗೆ ಹರಿಸಿ ಎಂದು ಒತ್ತಾಯಿಸಿದರು. ಅಷ್ಟೇ ಅಲ್ಲದೇ ತಹಶೀಲ್ದಾರ ಸಿ‌‌‌.ಎಸ್.ಕುಲಕರ್ಣಿ ಅವರ ಜೊತೆ ಮಾತನಾಡಿ ನೀರು ಬಿಡುವಂತೆ ಒತ್ತಾಯಿಸಿದರು. ನೀರು ನೀಡದೆ ಹೋದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ