ಮೋಜಿನ ಜೀವನಕ್ಕಾಗಿ ಬೈಕ್ ಕಳ್ಳತನ !

Kannada News

26-07-2017

ಬೆಂಗಳೂರು: ಮೋಜಿನ ಜೀವನಕ್ಕಾಗಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಕಳ್ಳ ಹಾಗೂ ಕಳವು ವಾಹನಗಳನ್ನು ಕಡಿಮೆ ಬೆಲೆಗೆ ಖರೀದಿಸುತ್ತಿದ್ದ, ಆರೋಪಿ ಸೇರಿದಂತೆ ಇಬ್ಬರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಕುಮಾರಸ್ವಾಮಿ ಲೇಔಟ್ ನ ಸರಬಂಡೆ ಪಾಳ್ಯದ, ವಾಸಿಂ ಅಕ್ರಮ್ ಅಲಿಯಾಸ್ ವಾಸಿ (24) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ ಕಳವು ಮಾಡಿದ ಬೈಕ್‍ಗಳನ್ನು ಖರೀದಿಸುತ್ತಿದ್ದ ಅಗ್ರಹಾರ ದಾಸರಹಳ್ಳಿಯ ಯೋಗರಾಜ್ ಅಲಿಯಾಸ್ ರಾಜನನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳಿಂದ 10 ಲಕ್ಷ 35 ಸಾವಿರ ಮೌಲ್ಯದ 16 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ವಿಜಯನಗರ, ಬ್ಯಾಟರಾಯನಪುರ, ಬನಶಂಕರಿ, ಕಲಾಸಿಪಾಳ್ಯ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 16 ದ್ವಿಚಕ್ರ ವಾಹನ ಕಳವು ಪ್ರಕರಣಗಳನ್ನು ಕೆಂಪೇಗೌಡ ನಗರ ಪೊಲೀಸರು ಪತ್ತೆಹಚ್ಚಿದ್ದಾರೆ ಎಂದು ಡಿಸಿಪಿ ಡಾ.ಶರಣಪ್ಪ ಅವರು ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ